ಮಂಡ್ಯ: ಪ್ರವಾಸಿಗರಿಂದ ಹಣ ವಸೂಲಿ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್ ಠಾಣೆಯ ಮೂವರು ಕಾನ್ಸ್ ಟೇಬಲ್ ಗಳನ್ನು ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ.
ಪುರುಷೋತ್ತಮ್, ಅನಿಲ್ ಕುಮಾರ್ ಹಾಗೂ ಪ್ರಭಸ್ವಾಮಿ ಅಮಾನತುಗೊಂಡಿರುವ ಪೊಲೀಸ್ ಸಿಬ್ಬಂದಿಗಳು. ಹೊರರಾಜ್ಯಗಳಿಂದ ಬರುವ ಪ್ರವಾಸಿಗರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ಆರೋಪ ಮೂವರು ಪೊಲೀಸ್ ಸಿಬ್ಬಂದಿಗಳ ಮೇಲಿದೆ.
ತಮಿಳುನಾಡು, ಆಂಧ್ರಪ್ರದೇಶ, ಕೇರಳ ಹೀಗೆ ಬೇರೆ ಬೇರೆ ರಾಜ್ಯಗಳಿಂದ ಕೆ.ಆರ್.ಎಸ್ ನೋಡಲು ಬರುವ ಪ್ರವಾಸಿಗರಿಂದ ಹಣ ವಸೂಲಿ ಮಾಡುತ್ತಿದ್ದರು. ಪೊಲೀಸ್ ಕಾನ್ಸ್ ಟೇಬಲ್ ಗಳ ಹಣ ವಸೂಲಿ ಬಗ್ಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿಯೂ ವಿಡಿಯೋ ಪೋಸ್ಟ್ ಮಾಡಿದ್ದರು. ಈ ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಹಣ ವಸೂಲಿ ಮಾಡುತ್ತಿದ್ದ ಮೂವರು ಕಾನ್ಸ್ ಟೇಬಲ್ ಗಳನ್ನು ಮಂಡ್ಯ ಜಿಲ್ಲಾ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.