ಮಂಡ್ಯ: ಮಂಡ್ಯ ಜಿಲ್ಲೆ ಕೆ.ಆರ್.ಎಸ್. ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಲಾಗಿದೆ. ಜಲಾಶಯಕ್ಕೆ ಅಪಾಯವಿದೆ ಎನ್ನುವ ಅಂಶವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಡ್ಯಾಂ ಸುತ್ತಮುತ್ತಲಿನ 20 ಕಿಲೋ ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಎಲ್ಲಾ ರೀತಿಯ ಗಣಿಗಾರಿಕೆ ಚಟುವಟಿಕೆಗಳಿಗೆ ನಿರ್ಬಂಧ ಹೇರಿದೆ.
ಸೋಮವಾರ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಮಹತ್ವದ ಆದೇಶ ಹೊರಡಿಸಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಸಿ.ಜಿ. ಕುಮಾರ್ ಅವರು ಗಣಿಗಾರಿಕೆ ಪರವಾನಿಗೆ ನೀಡುವಾಗ ಜಿಲ್ಲಾಧಿಕಾರಿ ಭೂ ಪರಿವರ್ತನೆಗೆ ವಿಧಿಸಿದ್ದ ಷರತ್ತು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಕೇಂದ್ರೀಯ ಗಣಿ ಮತ್ತು ಇಂಧನ ಸಂಶೋಧನಾ ಸಂಸ್ಥೆಯಿಂದ ಜಲಾಶಯ ಹಾಗೂ ಸುತ್ತಲಿನ ಭಾಗದಲ್ಲಿ ಗಣಿಗಾರಿಕೆ ಚಟುವಟಿಕೆ ನಡೆಸುತ್ತಿರುವ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಸುವ ಅಗತ್ಯವಿದೆ ಎಂದು ನ್ಯಾಯ ಹೈಕೋರ್ಟ್ ನ್ಯಾಯ ಪೀಠ ತೀರ್ಮಾನಿಸಿದೆ.