ಮಂಡ್ಯ: ಕೆಆರ್ ಎಸ್ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಶುರುವಾಗಿದೆ.
ಕಾವೇರಿ ನದಿ ತೀರದ ಪ್ರವಾಸಿ ತಾಣಗಳು, ಪಕ್ಷಿ ಧಾಮಗಳು ಮುಳುಗಡೆಯಾಗುವ ಆತಂಕ ಆರಂಭವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ವಿಶ್ವಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮದಲ್ಲಿ ಕಾವೇರಿ ನೀರಿನ ಅಬ್ಬರ ಜೋರಾಗಿದ್ದು, ಪ್ರವಾಹ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಪಕ್ಷಿಗಳ ಆಶ್ರಯ ತಾಣಗಳು ಭಗಶಃ ಮುಳುಗಡೆಯಾಗಿವೆ. ನದಿಯಲ್ಲಿ ನೀರು ಮತ್ತಷ್ಟು ಹೆಚ್ಚಾದರೆ ರಂಗನತಿಟ್ಟು ಪ್ರವಾಸಿ ತಾಣದ ವಾಕಿಂಗ್ ಪಾಥ್ ಗೆ ನೀರು ನುಗ್ಗಲಿದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರಿಗೆ ನಿಷೇಧಿಸಲಾಗಿದೆ. ಗೇಟ್ ಬಳಿಯಿಂದಲೇ ಪ್ರವಾಸಿಗರನ್ನು ವಾಪಾಸ್ ಕಳುಹಿಸಲಾಗುತ್ತಿದೆ.
ಇನ್ನೊಂದೆಡೆ ಕೆ ಆರೆಸ್ ಜಲಾಶಯದಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ಮೆರೆದ ಕಾರಣ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿದುಹೋಗಿದೆ ಎಂದು ತಿಳಿದುಬಂದಿದೆ.