
ಮೈಸೂರು: ಇಂದು ಬೆಳಗ್ಗೆಯಿಂದಲೇ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡಲಾಗುವುದು. ಕಾವೇರಿ ನದಿ ಮತ್ತು ನಾಲೆಗಳಿಗೆ ನೀರು ಬಿಡುಗಡೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.
ಜನ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಕೆರೆಕಟ್ಟೆಗಳನ್ನು ತುಂಬಿಸಲು ನೀರು ಹರಿಸಲು ತೀರ್ಮಾನಿಸಲಾಗಿದೆ. ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ನದಿ ಹಾಗೂ ನಾಲೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಹೊಸದಾಗಿ ಯಾವುದೇ ಬೆಳೆಗಳನ್ನು ಹಾಕದಂತೆ ರೈತರಿಗೆ ಮನವಿ ಮಾಡಲಾಗಿದೆ. ಮಳೆ ಬಾರದೆ ಇದ್ದರೆ 10 ದಿನ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.