alex Certify KRS ನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KRS ನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ

ಮಂಡ್ಯ: ಕೆ.ಆರ್.ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನು ಮುಂದೂಡಲಾಗಿದೆ. ನಾಲಾ ಆಧುನಿಕರಣ ಕಾಮಗಾರಿ ಹಿನ್ನೆಲೆಯಲ್ಲಿ ನೀರು ಬಿಡುಗಡೆ ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ.

ಜುಲೈ 10ರಿಂದ ನಾಲೆಗಳಿಗೆ ನೀರು ಹರಿಯುವ ಸಾಧ್ಯತೆ ಇದೆ. ಜುಲೈ 8ರ ಸಂಜೆಯಿಂದಲೇ ನೀರು ಬಿಡುಗಡೆ ಮಾಡುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಜುಲೈ 8ರಿಂದ 15 ದಿನಗಳ ಕಾಲ ನೀರು ಬಿಡುಗಡೆ ಬಗ್ಗೆ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಆದರೆ ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೀರು ಬಿಡುಗಡೆ ವಿಳಂಬವಾಗಿದೆ.

ಕಾಮಗಾರಿಯಿಂದಾಗಿ ನಾಲೆಯಲ್ಲಿ ನೀರು ಹರಿಯುವ ಸ್ಥಳಗಳಲ್ಲಿಯೇ ಯಂತ್ರೋಪಕರಣಗಳು ಇವೆ. ನಾಲೆಯಿಂದ ಯಂತ್ರೋಪಕರಣಗಳನ್ನು ತೆರವುಗೊಳಿಸಿ ಜುಲೈ 10ರಿಂದ ನೀರು ಬಿಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...