ಮೈಸೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ಜಲಾಶಯಗಳು ಭರ್ತಿಯಾಗಿದೆ. ಉತ್ತಮ ಮಳೆಯಾದ ಹಿನ್ನೆಲೆ ಕೆಎಆರ್ ಎಸ್, ಕಬಿನಿ ಜಲಾಶಯ ಭರ್ತಿ ಯಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ನಾಳೆ ಬಾಗಿನ ಅರ್ಪಿಸಲಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ 3 ನೇ ಬಾರಿಗೆ ಬಾಗಿನ ಅರ್ಪಿಸುತ್ತಿದ್ದಾರೆ. ಈ ವೇಳೆ ಡಿಸಿಎಂ ಡಿಕೆಶಿ ಸೇರಿ ಹಲವರು ಸಿಎಂ ಸಿದ್ದರಾಮಯ್ಯಗೆ ಸಾಥ್ ನೀಡಲಿದ್ದಾರೆ. ಹಾಗೂ ಹೆಚ್ ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ನಾಳೆ ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ ಮಾಡಲಿದ್ದಾರೆ.
ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳು ಭರ್ತಿಯಾದ ಹಿನ್ನಲೆಯಲ್ಲಿ ಜುಲೈ 29ರಂದು ಬೆಳಗ್ಗೆ 11 ಗಂಟೆಗೆ ಕೆ.ಆರ್.ಎಸ್. ಕಾವೇರಿ ಮಾತೆ ಪ್ರತಿಮೆ ಬಳಿ ಪೂಜೆ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರಾಜ್ಯದಲ್ಲಿ ಕಳೆದ 10-15 ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜಲಾಶಯಗಳಿಗೆ ಜೀವ ಕಳೆ ಬಂದಿದೆ. ನದಿ- ಹಳ್ಳಗಳು ಉಕ್ಕಿ ಹರಿಯುತ್ತಿದೆ. ರಾಜ್ಯದಲ್ಲಿ ಆಗಸ್ಟ್ 1 ರ ತನಕ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.