
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟ್ವೆಂಟಿ – 20 ಅಂತಾರಾಷ್ಟ್ರೀಯ ಪಂದ್ಯವನ್ನು ಬುಧವಾರಕ್ಕೆ ಮುಂದೂಡಲಾಗಿದೆ. ಕೃನಾಲ್ ಪಾಂಡ್ಯ ಕೊರೊನಾ ಪಾಸಿಟಿವ್ ಆಗಿರುವುದು ಇದಕ್ಕೆ ಕಾರಣವಾಗಿದೆ. ಮಂಗಳವಾರ ಕೊರೊನಾ ಪರೀಕ್ಷೆ ವರದಿ ಪಾಸಿಟಿವ್ ಬಂದಿದೆ. ಕೃನಾಲ್ ಅವ್ರನ್ನು ತಂಡದಿಂದ ಪ್ರತ್ಯೇಕವಾಗಿರಿಸಲಾಗಿದೆ.
ಎಂಟು ಆಟಗಾರರು ಕೃನಾಲ್ ನಿಕಟ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಅವರನ್ನು ಹೊಟೇಲ್ ಕೋಣೆಯಲ್ಲಿ ಪ್ರತ್ಯೇಕಿಸಲಾಗಿದೆ. ಎಲ್ಲರ ಪರೀಕ್ಷಾ ವರದಿ ನೆಗೆಟಿವ್ ಬಂದಲ್ಲಿ ನಾಳೆ ಪಂದ್ಯ ನಡೆಯಲಿದೆ. ಮಂಗಳವಾರ ಬೆಳಿಗ್ಗೆ ಪಂದ್ಯಕ್ಕೆ ಮುಂಚಿತವಾಗಿ ನಡೆಸಿದ ರ್ಯಾಪಿಡ್ ಪರೀಕ್ಷೆಯಲ್ಲಿ ಪಾಂಡ್ಯ ವರದಿ ಪಾಸಿಟಿವ್ ಬಂದಿತ್ತು ಎಂದು ಬಿಸಿಸಿಐ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ. ಶ್ರೀಲಂಕಾ ಆಟಗಾರರ ವರದಿ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಬುಧವಾರ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
ಭಾರತ, ಶ್ರೀಲಂಕಾ ವಿರುದ್ಧ ಮೊದಲ ಪಂದ್ಯವನ್ನು 38 ರನ್‌ಗಳಿಂದ ಗೆದ್ದುಕೊಂಡಿತ್ತು. ಎರಡನೇ ಪಂದ್ಯ ಮಂಗಳವಾರ ನಡೆಯಬೇಕಿತ್ತು. ಕೃನಾಲ್ ಮೊದಲ ಆಟದಲ್ಲಿ ಮೂರು ರನ್ ಗಳಿಸಿ, ಎರಡು ಓವರ್‌ಗಳಲ್ಲಿ ಒಂದು ವಿಕೆಟ್ ಪಡೆದಿದ್ದರು.