ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈಗೊಂಡಿರುವ ‘ಭಾರತ್ ಜೋಡೋ ಯಾತ್ರೆ’ ಬಗ್ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದು, ಅದು ಭಾರತ್ ಜೋಡೋ ಯಾತ್ರೆಯಲ್ಲ, ಕಾಂಗ್ರೆಸ್ ಜೋಡು ಯಾತ್ರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಎಲ್ಲಾ ಕಡೆ ತೋಡೋ ಆಗಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿದೆ ಎಂದು ಈಶ್ವರಪ್ಪ ಪ್ರಶ್ನಿಸಿದ ಅವರು, ಚುನಾವಣೆಯ ನಂತರ ರಾಜ್ಯದಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಹುಡುಕಬೇಕಾಗಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹೋದ ಕಡೆಯಲ್ಲ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿದೆ ಎಂದು ಹೇಳಿದ್ದಾರೆ.