
ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಅಪಾರ್ಥ ಕಲ್ಲಿಸುವ ಕೆಲಸ ಆಗಬಾರದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಹೇಳಿದ ಮಾತನ್ನು ಅಪಾರ್ಥ ಕಲ್ಪಿಸುವ ರೀತಿ ಕಾಂಗ್ರೆಸ್ನವರು ಮಾತನಾಡುತ್ತಿದ್ದಾರೆ. ಈಶ್ವರಪ್ಪ ರಾಷ್ಟ್ರದ್ರೋಹಿ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಿ ಎಂದಿದ್ದಾರೆ. ಆದರೆ ಅವರ ಹೇಳಿಕೆ ಬಗ್ಗೆ ಟೀಕೆ, ಟಿಪ್ಪಣಿ, ಅಪಾರ್ಥ ಕಲ್ಪಿಸುವ ಕೆಲಸವಾಗುತ್ತಿದೆ ಎಂದು ಹೇಳಿದ್ದಾರೆ.
ಈಶ್ವರಪ್ಪನವರ ವಿರುದ್ದ ಎಫ್ಐಆರ್ ಹಾಕಿದ್ರೆ ಏನು ತೊಂದರೆ ಇಲ್ಲ, ಅದನ್ನು ನಾವು ಎದುರಿಸುತ್ತೇವೆ ಎಂದು ಹೇಳಿದ ಯಡಿಯೂರಪ್ಪ, ದೆಹಲಿಯಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಖಂಡಿಸಿದ್ದಾರೆ.
ಸಿದ್ದರಾಮಯ್ಯ ಏನು ಬೇಕಾದರೂ ಹೇಳಿಕೆ ಕೊಡುತ್ತಾರೆ. ನಾನು ಹೇಳಿದ್ದೆ ಸರಿ ಅಂತಾ ಸಾಬೀತು ಮಾಡುವ ಪ್ರಯತ್ನ ಮಾಡುತ್ತಾರೆ. ಸಿದ್ದರಾಮಯ್ಯ ಶಾಸಕರನ್ನು ದೆಹಲಿಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುವ ಮೂಲಕ ರಾಜಕೀಯ ದೊಂಬರಾಟ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.