ನವದೆಹಲಿ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕೇಸರಿ ದ್ವಜ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ದೂರು ದಾಖಲಾಗಿದೆ.
ಆಮ್ ಆದ್ಮಿ ಪಕ್ಷದ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಅವರು ದೂರು ನೀಡಿದ್ದಾರೆ. ದೆಹಲಿಯ ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಈಶ್ವರಪ್ಪನವರ ವಿರುದ್ಧ ದೂರು ದಾಖಲಾಗಿದೆ. ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದ ಹಿನ್ನಲೆಯಲ್ಲಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ ಎನ್ನಲಾಗಿದೆ.