ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಕೊನೆ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆಯಬಹುದೆಂದು ಹೇಳಲಾಗಿತ್ತಾದರೂ ಯಾವುದಕ್ಕೂ ಬಗ್ಗದ ಈಶ್ವರಪ್ಪ ಈ ಮೊದಲೇ ಹೇಳಿದಂತೆ ಕಣದಲ್ಲಿ ಉಳಿದಿದ್ದಾರೆ.
ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.22 ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಇವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ.
ಬಿಜೆಪಿಯಿಂದ ಬಿ.ವೈ. ರಾಘವೇಂದ್ರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವ ರಾಜ್ ಕುಮಾರ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ. ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ., ಬಹುಜನ ಸಮಾಜ ಪಾರ್ಟಿಯಿಂದ ಎ.ಡಿ. ಶಿವಪ್ಪ, ಯಂಗ್‍ಸ್ಟರ್ ಎಂಪರ್‍ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್. ಈಶ್ವರಪ್ಪ, ರವಿಕುಮಾರ್ ಎಸ್., ಶಿವರುದ್ರಯ್ಯ ಸ್ವಾಮಿ, ಹೆಚ್. ಸುರೇಶ್ ಪೂಜಾರಿ, ಚಂದ್ರಶೇಖರ್ ಹೆಚ್.ಸಿ., ಜಾನ್ ಬೆನ್ನಿ, ಪಿ. ಶ್ರೀಪತಿ, ರವಿಕುಮಾರ್ ಎನ್., ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್., ಹನುಮಂತಪ್ಪ, ಜಿ. ಜಯದೇವ, ಎನ್.ವಿ. ನವೀನ್ ಕುಮಾರ್, ಗಣೇಶ್.ಬಿ, ಕುಣಜೆ ಮಂಜುನಾಥ ಗೌಡ ಇವರು ಅಂತಿಮವಾಗಿ ಕಣದಲ್ಲಿದ್ದಾರೆ.