ಬಾಗಲಕೋಟೆ: ನಾನೇನಾದರೂ ತಪ್ಪು ಮಾಡಿದ್ದರೆ ಚೌಡೇಶ್ವರಿ ದೇವಿ ನನಗೆ ಶಿಕ್ಷೆ ಕೊಡಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನಮ್ಮ ಮನೆ ದೇವರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗಿ ಬಂದಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ ಅಂದರೆ ಶಿಕ್ಷೆಯಿಂದ ಮುಕ್ತಿ ನೀಡಲಿ. ಇದು ದೇವರಲ್ಲಿ ನನ್ನ ಪ್ರಾರ್ಥನೆ ಎಂದು ಅವರು ಹೇಳಿದ್ದಾರೆ.
15 ದಿನದಲ್ಲಿ ಇದಕ್ಕೊಂದು ರೂಪ ಬರುತ್ತದೆ ಎಂದುಕೊಂಡಿದ್ದೇನೆ. ಸಂಪುಟಕ್ಕೆ ಸೇರಿಸಿಕೊಳ್ಳುವುದು, ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ. ಕೇಂದ್ರದ ಬಿಜೆಪಿ ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ನೂರಕ್ಕೆ ನೂರರಷ್ಟು ದೇವರ ಕೃಪೆಗೆ ಪಾತ್ರನಾಗುತ್ತೇನೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ವಿಧಾನಪರಿಷತ್ ಟಿಕೆಟ್ ಗಾಗಿ ಬಡಿದಾಡಿದರು. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಗುಂಪುಗಳಿವೆ ಎಂದು ಈಶ್ವರಪ್ಪ ಟೀಕಿಸಿದ್ದಾರೆ.