alex Certify ಚುನಾವಣಾ ಪ್ರಚಾರಕ್ಕೆ ಅಡ್ಡಿ, ರಸ್ತೆಯಲ್ಲೇ ಯಡಿಯೂರಪ್ಪ ಕುಟುಂಬದ ವಿರುದ್ಧ ಹರಿಹಾಯ್ದ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣಾ ಪ್ರಚಾರಕ್ಕೆ ಅಡ್ಡಿ, ರಸ್ತೆಯಲ್ಲೇ ಯಡಿಯೂರಪ್ಪ ಕುಟುಂಬದ ವಿರುದ್ಧ ಹರಿಹಾಯ್ದ ಈಶ್ವರಪ್ಪ

ಶಿವಮೊಗ್ಗ: ಅನುಮತಿ ಇದ್ದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಚುನಾವಣಾ ಪ್ರಚಾರಕ್ಕೆ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಘಟನೆ ನಡೆದಿದೆ. ಮೈಲಾರ ಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಚುನಾವಣೆ ಪ್ರಚಾರಕ್ಕೆ ಈಶ್ವರಪ್ಪ ಬೆಂಬಲಿಗರು ಅನುಮತಿ ಪಡೆದುಕೊಂಡಿದ್ದರು.

ಪ್ರಚಾರಕ್ಕಾಗಿ ವೇದಿಕೆ, ಮೈಕ್, ಕುರ್ಚಿಗಳನ್ನು ಆಯೋಜಕರು ಹಾಕಿದ್ದರು. ಅಂತಿಮ ಕ್ಷಣದಲ್ಲಿ ಚುನಾವಣಾ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದಾರೆ. ಚುನಾವಣಾ ಅಧಿಕಾರಿಯ ವಿರುದ್ಧ ಕೆ.ಎಸ್. ಈಶ್ವರಪ್ಪ ಕೆಂಡಾಮಂಡಲರಾಗಿದ್ದಾರೆ. ರಸ್ತೆ ಬದಿಯಲ್ಲೇ ನಿಂತು ಈಶ್ವರಪ್ಪ ಪ್ರಚಾರ ಭಾಷಣ ಮಾಡಿದ್ದಾರೆ. ಭಾಷಣದ ಉದ್ದಕ್ಕೂ ಯಡಿಯೂರಪ್ಪ ಕುಟುಂಬದ ವಿರುದ್ಧ ಹರಿಹಾಯ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...