alex Certify ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024ರ ಅರ್ಜಿ ಸಲ್ಲಿಕೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಣೆ ಮಾಡಿದೆ.

ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024(ಕೆಸೆಟ್-2024) ಗೆ ಸಂಬಂಧಿಸಿದಂತೆ ದಿನಾಂಕ 13.07.2024 ರಂದು ವಿವರವಾದ ಅಧಿಸೂಚನೆ ಹೊರಡಿಸಿ ದಿನಾಂಕ 22.08.2024 ರ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು.

ನಂತರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 28.08.2024 ರ ವರೆಗೆ ವಿಸ್ತರಿಸಲಾಗಿತ್ತು. ಅದಾಗ್ಯೂ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಅರ್ಜಿ ಸಲ್ಲಿಕೆಯನ್ನು ವಿಸ್ತರಿಸುವಂತೆ ಕೋರಿದ್ದರಿಂದ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಕೊನೆಯ ಅವಕಾಶವಾಗಿ ಈ ಕೆಳಕಂಡಂತೆ ವಿಸ್ತರಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿಸ್ತರಿಸಲಾದ ಕೊನೆಯ ದಿನಾಂಕ : 02.09.2024

ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 03.09.2024

ಸೂಚನೆ :

ಅರ್ಹತಾ ನಿಬಂಧನೆಗಳು ಮತ್ತು ಪರೀಕ್ಷಾ ದಿನಾಂಕ ಹಾಗೂ ಇತರೆ ವಿವರಗಳಿಗಾಗಿ ದಿನಾಂಕ 13.07.2024 ರ ವಿವರವಾದ ಅಧಿಸೂಚನೆಯನ್ನು ಓದಿಕೊಳ್ಳಲು ಸೂಚಿಸಿದೆ.

ಅರ್ಜಿ ಸಲ್ಲಿಕೆಗೆ ಇದು ಅಂತಿಮ ಹಾಗೂ ಕೊನೆಯ ಅವಕಾಶವಾಗಿರುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...