alex Certify KSRP, IRB ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ದಿನಾಂಕ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KSRP, IRB ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ದಿನಾಂಕ ನಿಗದಿ

ಬೆಂಗಳೂರು: ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ(KSRP) ಹಾಗೂ ಇಂಡಿಯನ್ ರಿಸರ್ವ್ ಬೆಟಾಲಿಯನ್(IRB) ವಿಭಾಗಗಳ 70 ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದೆ.

ರಾಜ್ಯ ಪೊಲೀಸ್ ನೇಮಕಾತಿ ವಿಭಾಗ ಡಿಸೆಂಬರ್ 18ರಂದು ಲಿಖಿತ ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದೆ, ಪೊಲೀಸ್ ಇಲಾಖೆಯ ವೆಬ್ಸೈಟ್ http://ksp.karnataka.gov.in ನಲ್ಲಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳುವಂತೆ ಅರ್ಹ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ.

2021 ರಲ್ಲಿ ಎಸ್ಐ(ಸಿವಿಲ್) ಹುದ್ದೆಗಳು, ಕೆ.ಎಸ್.ಆರ್.ಪಿ./ಐ.ಆರ್.ಬಿ. ಪಿಎಸ್ಐ ಮೊದಲಾದ ಹುದ್ದೆಗಳ ನೇಮಕಾತಿಗೆ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿತ್ತು. ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಹಗರಣ ಹಿನ್ನೆಲೆಯಲ್ಲಿ KSRP, IRB ಪರೀಕ್ಷೆ ತಡೆ ಹಿಡಿಯಲಾಗಿತ್ತು. ಈಗ ದಿನಾಂಕ ನಿಗದಿಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...