alex Certify BIG NEWS: KSRP ಹೆಡ್ ಕಾನ್ಸ್ ಟೇಬಲ್ ಪ್ರವಾಸಿ ಮಂದಿರದಲ್ಲಿ ಶವವಾಗಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: KSRP ಹೆಡ್ ಕಾನ್ಸ್ ಟೇಬಲ್ ಪ್ರವಾಸಿ ಮಂದಿರದಲ್ಲಿ ಶವವಾಗಿ ಪತ್ತೆ

ಹಾಸನ: ಪ್ರವಾಸಿ ಮಂದಿರದಲ್ಲಿ ಕೆ.ಎಸ್.ಆರ್.ಪಿ ಹೆಡ್ ಕಾನ್ಸ್ ಟೇಬಲ್ ಓರ್ವರು ಶವವಾಗಿ ಪತ್ತೆಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

51 ವರ್ಷದ ರಾಜೇಂದ್ರ ಮೃತ ಹೆಡ್ ಕಾನ್ಸ್ ಟೇಬಲ್. ರಾಜೇಂದ್ರ ಕೆ.ಎಸ್.ಆರ್.ಪಿ 11ನೇ ಬೆಟಾಲಿಯನ್ ನ ಹೆಡ್ ಕಾನ್ಸ್ ಟೆಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಏಕಾಏಕಿ ಸಾವನ್ನಪ್ಪಿದ್ದಾರೆ.

ಹಾಸನದ ಎನ್.ಆರ್.ವೃತ್ತದ ಬಳಿ ಇರುವ ಪ್ರವಾಸಿ ಮಂದಿರದಲ್ಲಿ ರಾತ್ರಿ ವೇಳೆ ಮೆಟ್ಟಿಲು ಇಳಿಯುವಾಗ ಕಾಲು ಜಾರಿ ಬಿದ್ದು ತಲೆಗೆ ಬಲವಾದ ಪೆಟ್ಟಾಗಿ ಅಥವಾ ಕೆಳಗೆ ಬಿದ್ದಾಗ ಹೃದಯಾಘತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...