
ಚಾಮರಾಜನಗರದಿಂದ ಹೊಗೇನಕಲ್ ಗೆ ತೆರಳುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುವ ಹೇಮಂತ್ ‘ನಿನ್ನ ಕಂಗಳ ಬಿಸಿಯ ಹನಿಗಳು’ ಎಂಬ ಗೀತೆಯನ್ನು ಹಾಡಿದ್ದು, ಇವರ ಗಾಯನಕ್ಕೆ ಪ್ರಯಾಣಿಕರು ಸೇರಿದಂತೆ ನೆಟ್ಟಿಗರು ಮಾರುಹೋಗಿದ್ದಾರೆ.
ಇವರು ಹಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರಿಂದ ಮೆಚ್ಚುಗೆಯ ಮಹಾಪೂರ ಹರಿದು ಬಂದಿದ್ದು, ಇವರಿಗೆ ಇನ್ನಷ್ಟು ಪ್ರೋತ್ಸಾಹ ನೀಡಿದರೆ ಓರ್ವ ಉತ್ತಮ ಗಾಯಕರಾಗುತ್ತಾರೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.