alex Certify KSRTC ಬಸ್ ಕಂಡಕ್ಟರ್ ಸುಶ್ರಾವ್ಯ ಗಾಯನಕ್ಕೆ ಮನಸೋತ ಪ್ರಯಾಣಿಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಬಸ್ ಕಂಡಕ್ಟರ್ ಸುಶ್ರಾವ್ಯ ಗಾಯನಕ್ಕೆ ಮನಸೋತ ಪ್ರಯಾಣಿಕರು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಂಡಕ್ಟರ್ ಒಬ್ಬರು ಬಸ್ ನಲ್ಲಿಯೇ ಸುಶ್ರಾವ್ಯವಾಗಿ ಹಾಡು ಹೇಳಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಚಾಮರಾಜನಗರದಿಂದ ಹೊಗೇನಕಲ್ ಗೆ ತೆರಳುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುವ ಹೇಮಂತ್ ‘ನಿನ್ನ ಕಂಗಳ ಬಿಸಿಯ ಹನಿಗಳು’ ಎಂಬ ಗೀತೆಯನ್ನು ಹಾಡಿದ್ದು, ಇವರ ಗಾಯನಕ್ಕೆ ಪ್ರಯಾಣಿಕರು ಸೇರಿದಂತೆ ನೆಟ್ಟಿಗರು ಮಾರುಹೋಗಿದ್ದಾರೆ.

ಇವರು ಹಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರಿಂದ ಮೆಚ್ಚುಗೆಯ ಮಹಾಪೂರ ಹರಿದು ಬಂದಿದ್ದು, ಇವರಿಗೆ ಇನ್ನಷ್ಟು ಪ್ರೋತ್ಸಾಹ ನೀಡಿದರೆ ಓರ್ವ ಉತ್ತಮ ಗಾಯಕರಾಗುತ್ತಾರೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

— Harish Nagaraju/ಹರೀಶ್ ನಾಗರಾಜು (@AnchorHarishN) September 20, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...