
ಚಿಕ್ಕಬಳ್ಳಾಪುರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಎರಡೂ ವಾಹನಗಳು ಸಂಪೂರ್ಣ ನುಜ್ಜುಗುಜ್ಜಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಹಾಗೂ ಚಾಲಕರಿಗೆ ಯಾವುದೇ ತೊಂದರೆಯಾಗಿಲ್ಲ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕಬಳ್ಳಾಪುರದಿಂದ ಧರ್ಮಸ್ಥಕ್ಕೆ ತೆರಳುತ್ತಿದ್ದ ಬಸ್, ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರಕ್ಕೆ ಕಂಬಿ ತುಂಬಿಸಿಕೊಂಡು ಸಾಗಿಸುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ರಸ್ತೆ ತಿರುವಿನಲ್ಲಿ ವೇಗವಾಗಿ ಬಂದ ಎರಡೂ ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿವೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.