ಕೊರೊನಾ ಎರಡನೇ ಅಲೆ ಆರ್ಭಟ ತಣ್ಣಗಾಗುತ್ತಾ ಬರುತ್ತಿದ್ದಂತೆ ರಾಜ್ಯ ಸರ್ಕಾರ ಶಾಲಾ – ಕಾಲೇಜುಗಳನ್ನು ಆರಂಭಿಸಲು ಮುಂದಾಗಿದೆ. ಈಗಾಗಲೇ 9ರಿಂದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಸಹ ಅತ್ಯುತ್ಸಾಹದಿಂದ ತರಗತಿಗಳಿಗೆ ಹಾಜರಾಗುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯತಾ ಅವಧಿಯನ್ನು ಸೆಪ್ಟೆಂಬರ್ 15ರವರೆಗೆ ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳು ಗುರುತಿನ ಚೀಟಿ, ಶುಲ್ಕ ರಸೀದಿಯನ್ನು ನಿರ್ವಾಹಕರಿಗೆ ತೋರಿಸುವ ಮೂಲಕ ಪ್ರಯಾಣಿಸಬಹುದಾಗಿದೆ.
ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಾಸ್ ಇಲ್ಲದವರಿಗೂ ಉಚಿತ ಪ್ರಯಾಣ; ಬಸ್ ಪಾಸ್ ಅವಧಿ ವಿಸ್ತರಣೆ
ಈ ವರ್ಷವೂ ಸೇವಾಸಿಂಧು ಪೋರ್ಟಲ್ ಮೂಲಕ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಒಂದೊಮ್ಮೆ ಕಳೆದ ಸಾಲಿನಲ್ಲಿ ಬಸ್ ಪಾಸ್ ಪಡೆಯದಿರುವ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿ ಅಥವಾ ಶುಲ್ಕ ಪಾವತಿಸಿ ರಶೀದಿ ತೋರಿಸುವ ಮೂಲಕ ಸಾಮಾನ್ಯ ಮತ್ತು ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.