ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿ ಇಲ್ಲಿದೆ. ಬಸ್ ಟಿಕೆಟ್ ದರ ಏರಿಕೆ ಮಾಡಿಲ್ಲ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ದರ ಏರಿಕೆ ಮಾಡುವಂತೆ ನಿಗಮಗಳಿಂದ ಪ್ರಸ್ತಾವನೆ ಬಂದಿತ್ತು. ಆದರೆ ಕೋವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಸಧ್ಯಕ್ಕೆ ದರ ಏರಿಸಲ್ಲ ಎಂದು ಹೇಳಿದರು.
ಕುಟುಂಬ ಸಮೇತ ದೆಹಲಿಯತ್ತ ಹೊರಟ ಎ. ನಾರಾಯಣಸ್ವಾಮಿ; ಹಿಮಾಲಯ ತೋರಿಸಲು ಕರೆದುಕೊಂಡು ಹೋಗುತ್ತಿದ್ದೇನೆ ಎಂದ ಸಂಸದ
ಲಾಕ್ ಡೌನ್ ನಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರ ಏರಿಸಿದರೆ ಮತ್ತಷ್ಟು ತೊಂದರೆಯಾಗುತ್ತದೆ. ಹಾಗಾಗಿ ಟಿಕೆಟ್ ದರ ಏರಿಸುವುದಿಲ್ಲ ಎಂದು ತಿಳಿಸಿದರು.