ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 100 ಹೊಸ ಅಶ್ವಮೇಧ ಕ್ಲಾಸಿಕ್ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಗಳ ಮೇಲೆ ಕೆ.ಎಸ್.ಆರ್.ಟಿ.ಸಿ 100 ಅಶ್ವಮೇಧ ಕ್ಲಾಸಿಕ್ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾಥ್ ನೀಡಿದರು.
ಮುಂದಿನ ದಿನಗಳಲ್ಲಿ 1000 ಬಸ್ ಗಳನ್ನು ಖರೀದಿಸುವ ಗುರಿ ಹೊಂದಲಾಗಿದೆ. ಅಶ್ವಮೇಧ ಕ್ಲಾಸಿಕ್ ಬಸ್ ಗಳಲ್ಲಿ ಮಹಿಳೆಯರ ಸುರಕ್ಷಿತೆಗಾಗಿ ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮರಾ, ಮೊಬೈಲ್ ಚಾರ್ಜಿಂಗ್ ಪಾಯಿಂಟ್, 52 ಬಜೆಟ್ ಆಸನ, ಬಸ್ ಒಳಗೆ ಹಾಗೂ ಹೊರಗೆ ಎಲ್ ಇಡಿ ಮಾರ್ಗ ಫಲಕ ಅಳವಡಿಸಲಾಗಿದೆ.
ಈ ಬಸ್ ಗಳು ರಾಜಧಾನಿ ಬೆಂಗಳೂರಿನಿಂದ ಎಲ್ಲಾ ಜಿಲ್ಲಾ ಕೇಂದ್ರಗಳಿಗೂ ಸಂಚರಿಸಲಿವೆ. ಈ ಬಸ್ ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಲಾಗಿದೆ.