
ನವೆಂಬರ್ 2ರಂದು ಹಾಸನದ ‘ಹಾಸನಾಂಬ’ ದೇಗುಲದ ಬಾಗಿಲು ತೆರೆಯಲಿದ್ದು, ಮೊದಲ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುವುದಿಲ್ಲ. ನವೆಂಬರ್ 3 ರಿಂದ ಸಾರ್ವಜನಿಕ ದರ್ಶನ ಆರಂಭವಾಗಲಿದ್ದು, ಇದಕ್ಕೆ ತೆರಳುವವರಿಗೆ ಗುಡ್ ನ್ಯೂಸ್ ಇಲ್ಲಿದೆ.
ಈ ಬಾರಿ 10 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬ ಉತ್ಸವಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಇದೇ ಪ್ರಥಮ ಬಾರಿ ಹಾಸನ ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ನೂರು ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮುಂದಾಗಿದೆ.
ಮಹಿಳೆಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ‘ಶಕ್ತಿ’ ಯೋಜನೆ ಜಾರಿಯಲ್ಲಿರುವುದರಿಂದ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಹಾಗೆಯೇ ಹೊರ ರಾಜ್ಯಗಳಿಂದ ಸಹ ಭಕ್ತರು ಆಗಮಿಸಲಿದ್ದಾರೆ.