alex Certify BREAKING: KSRTC ಬಸ್ ಡಿಕ್ಕಿ; ಕಾರ್ ನಲ್ಲಿದ್ದ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: KSRTC ಬಸ್ ಡಿಕ್ಕಿ; ಕಾರ್ ನಲ್ಲಿದ್ದ ಮೂವರ ಸಾವು

ಯಾದಗಿರಿ: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಕಾರ್ ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಮದ್ದರಕಿ ಗ್ರಾಮದ ಬಳಿ ನಡೆದಿದೆ.

ನಾಗರಾಜ್ ಸಜ್ಜನ್(59), ಮಹಾದೇವಿ(50), ರೇಣುಕಾ(45) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ರಂಗಂಪೇಟೆ ನಿವಾಸಿಗಳಾಗಿದ್ದಾರೆ. ಮೃತ ನಾಗರಾಜ್ ಸಜ್ಜನ್ ಕೃಷಿ ಇಲಾಖೆ ಅಧಿಕಾರಿಯಾಗಿದ್ದಾರೆ. ಕಲಬುರ್ಗಿಯಲ್ಲಿ ಸಂಬಂಧಿಕರ ಮದುವೆ ಮುಗಿಸಿ ವಾಪಸ್ ತೆರಳುವ ವೇಳೆ ಘಟನೆ ನಡೆದಿದೆ.  ಕೆಎಸ್ಆರ್ಟಿಸಿ ಬಸ್ ನಲ್ಲಿದ್ದ ಐದಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...