
ಗದಗ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ.
ಬಸ್ ಅಪಘಾತಕ್ಕೀಡಾಗುತ್ತಿದ್ದಂತೆ ಪ್ರಯಾಣಿಕರು ಕೂಗಾಟ, ಚೀರಾಟ ನಡೆಸಿದ್ದಾರೆ. ಬಸ್ ನ ಮುಂದಿನ ಗ್ಲಾಸ್ ಒಡೆದು ಗ್ರಾಮಸ್ಥರು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ರಕ್ಷಿಸಿ ಆಂಬುಲೆನ್ಸ್ ಗಳ ಮೂಲಕ ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಬೆಳ್ಳಟ್ಟಿಯಿಂದ ಮುಂಡರಗಿಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿದೆ. ಬಸ್ ಕಂಡೀಶನ್ ಸರಿ ಇಲ್ಲದ ಕಾರಣ ಪಲ್ಟಿಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.