ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಎಸ್.ಆರ್.ಟಿ.ಸಿ.) ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಮಧ್ಯಪ್ರದೇಶದ ನಾಯಕತ್ವ ಪ್ರಶಸ್ತಿ ಪಡೆದುಕೊಂಡಿದೆ.
ಇಂದೋರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಲ್ಡ್ ಸಿಎಸ್ ಆರ್ ಡೇ ಮತ್ತು ವರ್ಲ್ಡ್ ಸಸ್ಟೈನೆಬಿಲಿಟಿ ಸಂಸ್ಥಾಪಕ ಡಾ. ಆರ್.ಎಲ್. ಭಾಟಿಯಾ, ಫನ್ ಅಂಡ್ ಜಾಯ್ ಸಿಇಒ ಡಾ. ಅಲೋಕ್ ಪಂಡಿತ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಮುಖ್ಯ ಸಂಚಾರ ವ್ಯವಸ್ಥಾಪಕ(ಕಾರ್ಯಾಚರಣೆ) ಜೆಯ ಅಂಥೋಣಿ ಜಾರ್ಜ್, ಮುಖ್ಯ ಭದ್ರತಾ ಮತ್ತು ಜಾಗೃತ ಅಧಿಕಾರಿ ಜಿ.ಎನ್. ಲಿಂಗರಾಜು ಅವರು ನಿಗಮದ ಪರವಾಗಿ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಕೆಎಸ್ಆರ್‌ಟಿಸಿಯಲ್ಲಿ ಅನುಷ್ಠಾನಗೊಳಿಸಲಾದ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಮಧ್ಯಪ್ರದೇಶ ನಾಯಕತ್ವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.