
ಬೆಂಗಳೂರು: ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲ್ಲಿದ್ದು, ಪರೀಕ್ಷಾ ಕೇಂದ್ರಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಿಎಂಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.
ಈಗಾಗಲೇ ಕೆ.ಎಸ್.ಆರ್.ಟಿ.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಂದ ವಾಸ ಸ್ಥಳಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ವಿದ್ಯಾರ್ಥಿಗಳು ಮನೆಯಿಂದ ಪರೀಕ್ಷಾ ಕೇಂದ್ರದವರೆಗೆ ಹೋಗಿಬರಲು ಬಿಎಂಟಿಸಿ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷಾ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳಲ್ಲಿ ಬಸ್ ಕಾರ್ಯಾಚರಣೆ ಇರುತ್ತದೆ. ಹೆಚ್ಚುವರಿ ಬಸ್ ಗಳ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.