alex Certify BIG NEWS: ಮುಂದುವರೆದ ಸಾರಿಗೆ ನೌಕರರ ಮುಷ್ಕರ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ -ರಸ್ತೆಗಿಳಿಯಲಿವೆ ಬಿಎಂಟಿಸಿ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದುವರೆದ ಸಾರಿಗೆ ನೌಕರರ ಮುಷ್ಕರ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ -ರಸ್ತೆಗಿಳಿಯಲಿವೆ ಬಿಎಂಟಿಸಿ..?

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಮುಂದುವರೆಸಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಗಿದೆ.

ಊರಿಗೆ ತೆರಳುವ ಪ್ರಯಾಣಿಕರು ದುಬಾರಿ ದರ ಕೊಟ್ಟು ಖಾಸಗಿ ವಾಹನಗಳಲ್ಲಿ ಪ್ರಯಾಣಿಸುವ ಅನಿವಾರ್ಯತೆ ಎದುರಾಗಿದೆ. ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆಯಾಗಿದ್ದು, ನೌಕರರ ಮನವೊಲಿಕೆಗೆ ಸರ್ಕಾರ ಕ್ರಮಕೈಗೊಂಡಿದೆ. ಆದರೆ, ನೌಕರರು ಮುಷ್ಕರ ಮುಂದುವರೆಸಿದ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದೆ.

ಪ್ರಮುಖ ಮಾರ್ಗಗಳಲ್ಲಿ ಖಾಸಗಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಸರಿಯಾದ ಬಸ್  ವ್ಯವಸ್ಥೆಗಳೀಲ್ಲದೇ ಜನ ಕಾಯುವಂತಾಗಿದೆ.

ಬಿಎಂಟಿಸಿ ನೌಕರರ ಮುಷ್ಕರಕ್ಕೆ ಸೊಪ್ಪು ಹಾಕಿಲ್ಲ. ಇಂದಿನಿಂದ ಬಿಎಂಟಿಸಿ ಬಸ್ ಗಳನ್ನು ರಸ್ತೆಗಿಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. ತರಬೇತಿನಿರತ ಸಿಬ್ಬಂದಿಗೆ ಕೆಲಸಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ. ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗಬೇಕೆಂದು ಬಿಎಂಟಿಸಿ ವತಿಯಿಂದ ಚಾಲಕರು, ನಿರ್ವಾಹಕರು, ಮೆಕಾನಿಕ್ ಗಳಿಗೆ ತಿಳಿಸಲಾಗಿದೆ. ಕೆಲಸಕ್ಕೆ ಗೈರು ಹಾಜರಾದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ. 1484 ತರಬೇತಿನಿರತ ಸಿಬ್ಬಂದಿ ಇದ್ದಾರೆ. ಇವರೆಲ್ಲ ಕೆಲಸಕ್ಕೆ ಹಾಜರಾದಲ್ಲಿ ಇಂದಿನಿಂದ ಬಿಎಂಟಿಸಿ ರಸ್ತೆಗಿಳಿಯಲಿವೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...