ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರ ನಾಳೆಯಿಂದ 9, 10 ನೇ ತರಗತಿ ಮತ್ತು ಪಿಯುಸಿ ತರಗತಿ ಆರಂಭವಾಗಲಿವೆ. ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ 500 ಕ್ಕೂ ಹೆಚ್ಚು ಬಸ್ ಗಳನ್ನು ಬಿಡಲಾಗುತ್ತಿದೆ.
9, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ, ಪ್ರಥಮ ಪಿಯುಸಿ ಶಾಲಾ-ಕಾಲೇಜುಗಳಿಗೆ ಹೋಗಿ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಮಯಕ್ಕೆ ಸರಿಯಾಗಿ KSRTC ಬಸ್ ಓಡಿಸಲಾಗುತ್ತದೆ. ಶಾಲಾ-ಕಾಲೇಜುಗಳಿಗೆ ಹೋಗಿಬರಲು ಪ್ರತಿ ಡಿಪೋ ವ್ಯಾಪ್ತಿಯಲ್ಲಿ 20ರಿಂದ 25 ಬಸ್ ಗಳ ಕಾರ್ಯಾಚರಣೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಅದೇ ರೀತಿ ಬೆಂಗಳೂರಿನಲ್ಲಿಯೂ ಹೆಚ್ಚುವರಿ BMTC ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಶಾಲಾ, ಕಾಲೇಜಿಗೆ ಹೋಬರಲು ವಿದ್ಯಾರ್ಥಿಗಳು ಕಳೆದ ಸಾಲಿನ ಪಾಸ್ ತೋರಿಸಬೇಕಿದೆ. 2020 -21 ನೇ ಸಾಲಿನ ಬಸ್ ಪಾಸ್, ಶಾಲಾ, ಕಾಲೇಜಿಗೆ ಸೇರಿದ ರಶೀದಿ, ಗುರುತಿನ ಚೀಟಿ ತೋರಿಸಿ ವಿದ್ಯಾರ್ಥಿಗಳು BMTC ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಹೇಳಲಾಗಿದೆ.