ಗದಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಿದ್ದು, ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ. ದಾಖಲೆಗಳಿಲ್ಲದೇ ಯಾವುದೇ ವಸ್ತು, ಹಣ ಸಾಗಿಸುವಂತಿಲ್ಲ. ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ದಾಖಲೆ ಇಲ್ಲದೇ 5 ಲಕ್ಷ ಹಣ ಸಾಗಿಸುತ್ತಿದ್ದ ಪ್ರಕರಣ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಬೆಳಕಿಗೆ ಬಂದಿದೆ.
ಬಸ್ ತಪಾಸಣೆ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿ ಮೂಲದ ಸೈಯ್ಯದ್ ಎಂಬಾತ ಈ ಹಣವನ್ನು ಲಕ್ಷ್ಮೀಶ್ವರಕ್ಕೆ ಕೊಂಡೊಯ್ಯುತ್ತಿದ್ದ ಎಂದು ತಿಳಿದುಬಂದಿದೆ. ಲಕ್ಷ್ಮೀಶ್ವರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.