ಹಾಸನ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹುಣಸೆಕೆರೆ ಬಳಿ ನಡೆದಿದೆ.
ಬೈಕ್ ಸವಾರರಾದ ಭಾನುಪ್ರಕಾಶ್ ಮತ್ತು ರಂಗಸ್ವಾಮಿ ಸ್ಥಳದಲ್ಲೇ ಮೃತಪಟ್ಟವರು ಎಂದು ಹೇಳಲಾಗಿದೆ. ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.