alex Certify KSRTC ಬಸ್-ಕಾರು ಮುಖಾಮುಖಿ ಡಿಕ್ಕಿ; ನಾಲ್ವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಬಸ್-ಕಾರು ಮುಖಾಮುಖಿ ಡಿಕ್ಕಿ; ನಾಲ್ವರ ದುರ್ಮರಣ

ದಾವಣಗೆರೆ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ.

ವೇಗವಾಗಿ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಎದುರಿನಿಂದ ಬಂದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರು ಚಾಲಕ ಹಾಗೂ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

30 ವರ್ಷದ ಸುನೀಲ್, 45 ವರ್ಷದ ಸುಮಾ, 62 ವರ್ಷದ ಶಾರದಮ್ಮ ಹಾಗೂ 40 ವರ್ಷದ ದಾಕ್ಷಾಯಿಣಿ ಮೃತರು. ಅಪಘಾತಕ್ಕೀಡಾದ ಬಸ್ಸಿಗೆ ಲಾರಿ ಕೂಡ ಡಿಕ್ಕಿ ಹೊಡೆದಿದ್ದು ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ನ್ಯಾಮತಿ ಠಾಣೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...