ಕಲಬುರ್ಗಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಲಬುರ್ಗಿ ಜಿಲ್ಲೆಯ ಆಳಂದ ಬಳಿಯ ಮಿನಿ ವಿಧಾನಾಸೌಧ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಿದ್ದಲಿಂಗಯ್ಯ ಹಾಗೂ 8 ವರ್ಷದ ಸಂಕೇತ್ ಮೃತ ದುರ್ದೈವಿಗಳು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.