![](https://kannadadunia.com/wp-content/uploads/2023/06/breaking-news-poster-design-template-d020bd02f944a333be71e17e3a38db24_screen-1.jpg)
ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಬೊಮ್ಮನಹಳ್ಳಿಯಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಓರ್ವ ಸವಾರ ಬಸ್ ಕೆಳಗೆ ಸಿಲುಕಿ ಸಾವನ್ನಪ್ಪಿದ್ದರು. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳು ಕಾಶಪ್ಪ (45) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಯಾದಗಿರಿ ಮೂಲದ ಹನುಮಂತ (55) ಸ್ಥಳದಲ್ಲೇ ಮೃತಪಟ್ಟಿದ್ದರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.