
ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಮಾಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.