
ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ದಿಯಲ್ಲಿ ನಡೆದಿದೆ.
ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ. ಓವರ್ ಟೇಕ್ ಮಾಡಲು ಹೋಗಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ.
ಗಾಯಾಳುಗಳು ಬೆಳಕವಾಡಿ ಗ್ರಾಮದವರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಮಂಡದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.