ಕೋಲಾರ : ಮೇಲಾಧಿಕಾರಿಗಳ ಕಿರುಕುಳಕ್ಕೆ ಮನನೊಂದು ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರದಲ್ಲಿ ನಡೆದಿದೆ.
ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಗ್ರಾಮದ ಸೋಮಾಚಾರಿ (50) ಎಂದು ಗುರುತಿಸಲಾಗಿದೆ. ಕೆಲಸದ ವೇಳೆ ಡಿಪೋ ಮ್ಯಾನೇಜರ್ ವೆಂಕಟೇಶ್ ಎಂಬುವವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.