
ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಡ್ರೈವ್ ಮಾಡುತ್ತಿದ್ದಾಗಲೇ ಬಸ್ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ಬಸ್ ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದು ಮಹಿಳೆ ಹಾಗೂ ಚಾಲಕ ಇಬ್ಬರೂ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ನಡೆದಿದೆ.
ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್ ಹಾಗೂ ದಮ್ಮನಕಟ್ಟೆ ಗ್ರಾಮದ ಮಹಿಳೆ ಲಕ್ಷ್ಮಮ್ಮ ಮೃತ ದುರ್ದೈವಿಗಳು.
ಬಸ್ ಡ್ರೈವ್ ಮಾಅಡುತ್ತಿದ್ದಾಗಲೇ ಚಾಲಕ ಸುನೀಲ್ ಕುಮಾರ್ ಗೆ ಏಕಾಏಕಿ ಹೃದಯಾಘತವಾಗಿ ಬಸ್ ಸೀಟ್ ನಲ್ಲಿ ಸ್ಟೇರಿಂಗ್ ಹಿಡಿದೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಾದಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.
ಬಸ್ ರಸ್ತೆ ಪಕ್ಕದಲ್ಲಿ ಹೋಗಿ ಪಲ್ಟಿಯಾಗಿ ಬಿದ್ದಿದೆ. ಬಸ್ ನಲ್ಲಿದ್ದ ಪ್ರಯಣಿಕರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.