ಮಡಿಕೇರಿ: ಸಂಬಳ ಪಾವತಿಸುವಂತೆ ಒತ್ತಾಯಿಸಿ ಕೆ.ಎಸ್.ಆರ್.ಟಿ.ಸಿ ಚಾಲಕರು ದಿಢೀರ್ ಪ್ರತಿಭಟನೆಗಿಳಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ.
ಕೆ.ಎಸ್.ಆರ್.ಟಿ.ಸಿಯ 48 ಹೊರಗುತ್ತಿಗೆ ಚಾಲಕರು ವೇತನ ಪಾವತಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಬಸ್ ಗಳನ್ನು ರಸ್ತೆಗಳಿಸದೇ ಪ್ರತಿಭಟನೆ ನಡೆಸಿದ್ದು, ಹಲವೆಡೆ ಬಸ್ ಸಂಚಾರ ಸ್ಥಗಿತಗೊಂಡಿದೆ.
ಹೊರಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಬಸ್ ಚಾಲಕರು ಪೂಜ್ಯಾಯ ಸೆಕ್ಯೂರಿಟಿ ಏಜೆನ್ಸಿ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಇದ್ದ ಏಜೆನ್ಸಿ ಪ್ರತಿ ತಿಂಗಳು 23 ಸಾವಿರ ರೂಪಾಯಿ ಸಂಬಳ ಪಾವತಿ ಮಾಡುತ್ತಿತ್ತು. ಆದರೆ ಈಗ ಏಜೆನ್ಸಿ ಬದಲಾಗಿದ್ದು, 13-14 ಸಾವಿರ ಮಾತ್ರ ಸಂಬಳ ಪಾವತಿ ಮಾಡುತ್ತಿದೆ. ಅಲ್ಲದೇ ಸರಿಯಾಗಿ ವೇತನ ನೀಡುತ್ತಿಲ್ಲ . ಸಿ ಎಲ್ ರಜೆ ಕೂಡ ಕೊಡುತ್ತಿಲ್ಲ. ಇದರಿಂದ ಬಸ್ ಚಾಲಕರು ದಿಢೀರ್ ಪ್ರತಿಭಟನೆ ನಡೆಸಿದ್ದು, ಪೂರ್ಣ ಪ್ರಮಾಣದ ವೇತನ ಪಾವತಿಸುವಂತೆ ಒತ್ತಾಯಿಸಿದ್ದಾರೆ.