ಮಹಿಳೆಯರು ಸೇರಿ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಬಸ್ ಸಂಚಾರ

ಬೆಂಗಳೂರು: ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಜಾರಿಗೆ ತಂದಿರುವ ಶಕ್ತಿ ಯೋಜನೆಯನ್ನು ಸುಗಮವಾಗಿಸಲು, ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುವ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಗಳನ್ನು ಕಾರ್ಯಾಚರಣೆಗೊಳಿಸಲು ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ಪ್ರಯಾಣ ದಟ್ಟಣೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ಹಾಗೂ ವಿಶೇಷ ಜಾತ್ರೆ, ಹಬ್ಬದ ಸಂದರ್ಭದಲ್ಲಿ ದಟ್ಟಣೆಗೆ ಅನುಗುಣವಾಗಿ ಡಿಪೋ ಳಿಂದ ಹೆಚ್ಚುವರಿ ಬಸ್ ಗಳನ್ನು ಬಿಡುವಂತೆ ಸಂಬಂಧಿಸಿದ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಂತೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಬಿ. ಅನ್ಬುಕುಮಾರ್ ಶಕ್ತಿ ಯೋಜನೆ ಕುರಿತಾಗಿ ನಿಗಮದ 16 ವಿಭಾಗಗಳ ವಿಭಾಗಿಯ ನಿಯಂತ್ರಣ ಅಧಿಕಾರಿಗಳು, ಸಂಚಾರ ಅಧಿಕಾರಿಗಳು, 83 ಘಟಕಗಳ ವ್ಯವಸ್ಥಾಪಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ,

ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ವಿಶೇಷ ಜಾತ್ರೆ, ಹಬ್ಬದ ದಿನಗಳಲ್ಲಿ ಜನದಟ್ಟಣೆಗೆ ಅನುಗುಣವಾಗಿ ಡಿಪೋಗಳಿಂದ ಹೆಚ್ಚುವರಿ ಬಸ್ ಗಳನ್ನು ಕಾರ್ಯಾಚರಣೆಗೊಳಿಸಬೇಕು. ಯಾವುದೇ ಕಾರಣಕ್ಕೂ ಬಸ್ ಗಳ ನಿಯೋಜನೆ ಸಾರಿಗೆ ವ್ಯವಸ್ಥೆಯಲ್ಲಿ ಗೊಂದಲಕ್ಕೆ ಅವಕಾಶವಿರಬಾರದು. ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read