
ಹಾವೇರಿ: ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಮಕರವಳ್ಳಿ ಸಮೀಪ ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟಿದ್ದಾರೆ.
ಮಲ್ಲೇಶಪ್ಪ ಬೆಲ್ಲದ(49) ಮೃತಪಟ್ಟವರು ಎಂದು ಹೇಳಲಾಗಿದೆ. ಸರ್ಕಾರಿ ಬಸ್ ನಲ್ಲಿ ಆನವಟ್ಟಿಯಿಂದ ಹಾನಗಲ್ ಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿದೆ. ಅಕ್ಕಿಆಲೂರು ನಿವಾಸಿ ಮಲ್ಲೇಶಪ್ಪ ಬೆಲ್ಲದ ಪ್ರಯಾಣದ ವೇಳೆಯಲ್ಲೇ ಸಾವನ್ನಪ್ಪಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.