
ಬೆಂಗಳೂರು: 1,195 ಬಸ್ ಖರೀದಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಕೊರೋನಾ ಅವಧಿಯಲ್ಲಿ ಬಸ್ ಸೇವೆ ಕಡಿತವಾಗಿದ್ದ ಮಾರ್ಗಗಳಲ್ಲಿ ಮತ್ತೆ ಸೇವೆ ಒದಗಿಸಲು 500 ಕೋಟಿ ರೂ. ವೆಚ್ಚದಲ್ಲಿ 1,195 ಬಸ್ ಖರೀದಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.
ಕೆಎಸ್ಆರ್ಟಿಸಿ ವ್ಯಾಪ್ತಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 250 ಬಸ್ ಖರೀದಿಸಲಾಗುವುದು. ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಿಂದ 150 ಕೋಟಿ ರೂ. ವೆಚ್ಚದಲ್ಲಿ 375 ಬಸ್ ಗಳು, ಕಲ್ಯಾಣ ಕಾರ್ಯ ಕರ್ನಾಟಕ ಸಾರಿಗೆಯಿಂದ 100 ಕೋಟಿ ರೂ. ವೆಚ್ಚದಲ್ಲಿ 250 ಬಸ್ ಖರೀದಿಸಲಿದ್ದು, ಬಿಎಂಟಿಸಿಯಿಂದ 150 ಕೋಟಿ ರೂ ವೆಚ್ಚದಲ್ಲಿ 320 ಎಸಿ ಎಲೆಕ್ಟ್ರಿಕ್ ಬಸ್ ಗಳನ್ನು ಗುತ್ತಿಗೆ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.