alex Certify ಇಂದಿನಿಂದಲೇ ಬಸ್ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದಲೇ ಬಸ್ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ ಪ್ರಯಾಣಿಕರಿಗೂ ಮಾಸ್ ಬಳಕೆ ಕಡ್ಡಾಯ ಮಾಡಲಾಗಿದೆ. ಇಂದಿನಿಂದ ಪ್ರಯಾಣಿಕರು ಮಾಸ್ಕ್ ಧರಿಸದಿದ್ದರೆ ಬಸ್ ಗಳಿಗೆ ಪ್ರವೇಶ ನೀಡುವುದಿಲ್ಲ ಎನ್ನಲಾಗಿದೆ.

ಕೆ.ಎಸ್.ಆರ್.ಟಿ.ಸಿ. ಚಾಲಕರು, ಕಂಡಕ್ಟರ್, ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.

ಬಿಎಂಟಿಸಿ ಬಸ್ ಗಳಲ್ಲಿಯೂ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಮಾಸ್ಕ್ ಧರಿಸದ ಪ್ರಯಾಣಿಕರ ಮೇಲೆ ನಿಗಾ ವಹಿಸಲು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಕೊರೋನಾ ನಾಲ್ಕನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಬಿಎಂಟಿಸಿ ಕ್ರಮಕ್ಕೆ ಮುಂದಾಗಿದ್ದು, ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಿದೆ. ಈ ಕುರಿತು ಶುಕ್ರವಾರ ಸುತ್ತೋಲೆ ಹೊರಡಿಸಿರುವ ಬಿಎಂಟಿಸಿ ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸಾಮೂಹಿಕ ಸಾರಿಗೆ ಪ್ರಯಾಣದ ಸಂದರ್ಭದಲ್ಲಿ ಹೆಚ್ಚು ಜಾಗರೂಕರಾಗಿರಬೇಕು ಸೋಂಕು ಹರಡದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...