alex Certify ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಪಾಸ್ ಹೊಂದಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಪಾಸ್ ಹೊಂದಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಕ್ರಮಕೈಗೊಂಡಿದ್ದು, ಏಪ್ರಿಲ್ ತಿಂಗಳ ಮಾಸಿಕ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ.

ಏಪ್ರಿಲ್ ತಿಂಗಳಲ್ಲಿ ಸಾರಿಗೆ ನೌಕರರು 15 ದಿನ ಮುಷ್ಕರ ನಡೆಸಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಇದರಿಂದ ಬಸ್ ಸಂಚಾರ ಸ್ಥಗಿತಗೊಂಡು ಪಾಸ್ ಹೊಂದಿದ್ದ ಪ್ರಯಾಣಿಕರಿಗೆ ಬಳಕೆಗೆ ಅವಕಾಶ ಇರಲಿಲ್ಲ. ಈಗ ಲಾಕ್ಡೌನ್ ತೆರವಾಗಿ ಬಸ್ ಸಂಚಾರ ಆರಂಭವಾಗಿದ್ದು, ಅವಧಿ ಮುಗಿದ ಬಸ್ ಪಾಸ್ ಗಳಿಗೆ ಜುಲೈ 8 ರವರೆಗೆ ಅವಕಾಶ ನೀಡಲಾಗಿದೆ.

ಏಪ್ರಿಲ್ ತಿಂಗಳಲ್ಲಿ ಬಸ್ ಪಾಸ್ ಬಳಸಲು ಸಾಧ್ಯವಾಗದವರು ಜುಲೈ 8 ರವರೆಗೆ ಬಳಸಬಹುದು. ಏಪ್ರಿಲ್ 8 ರಿಂದ 27ರ ಅವಧಿಯಲ್ಲಿ ಮಾಸಿಕ ಪಾಸ್ ಗಳನ್ನು ಪಡೆದಿದ್ದಲ್ಲಿ ಅಂತಹ ಪ್ರಯಾಣಿಕರಿಗೆ ದಿನಾಂಕಗಳನ್ನು ಸೂಕ್ತವಾಗಿ ಪರಿಶೀಲಿಸಿ ಅಷ್ಟು ದಿನಗಳಿಗೆ ಅನುಗುಣವಾಗಿ ವಿಸ್ತರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪಾಸ್ ಹೊಂದಿದವರು ಪಾಸ್ ವಿತರಣೆಯ ಕೌಂಟರ್ ನಲ್ಲಿ ಚಾಲ್ತಿ ಅವಧಿಯ ದಿನಗಳಿಗೆ ವಿಸ್ತರಣೆಯಾಗಿರುವ ಬಗ್ಗೆ ವಿಸ್ತರಣೆ ದಿನಾಂಕ, ಸಹಿ ಮತ್ತು ಮೊಹರು ಹಾಕಿಸಿಕೊಳ್ಳಬೇಕೆಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...