
ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮತ್ತೆ ಒಂದು ತಿಂಗಳವರೆಗೆ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳು 2019 – 20 ನೇ ಸಾಲಿನ ಬಸ್ ಪಾಸ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ಫೆಬ್ರವರಿ 28 ರ ವರೆಗೆ ಕಳೆದ ಶೈಕ್ಷಣಿಕ ಸಾಲಿನ ಬಸ್ ಪಾಸ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಇದನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಪಾಸ್ ಹಾಗೂ ಪ್ರಸಕ್ತ ಸಾಲಿನಲ್ಲಿ ಶಾಲಾ ಕಾಲೇಜುಗಳಿಗೆ ಪ್ರವೇಶ ಪಡೆದು ಶುಲ್ಕ ಪಾವತಿಸಿದ ರಸೀದಿ ತೋರಿಸಿ ಮಾರ್ಚ್ 31 ರವರೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಹೇಳಲಾಗಿದೆ.