alex Certify BREAKING: ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಮೆಟ್ರೋ ಪಿಲ್ಲರ್ ಗೆ KSRTC ಬಸ್ ಡಿಕ್ಕಿ, ನಾಲ್ವರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಮೆಟ್ರೋ ಪಿಲ್ಲರ್ ಗೆ KSRTC ಬಸ್ ಡಿಕ್ಕಿ, ನಾಲ್ವರು ಗಂಭೀರ

ಬೆಂಗಳೂರು: ರಸ್ತೆಗುಂಡಿ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿಯಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 45 ಜನರ ಪೈಕಿ 29 ಜನ ಗಾಯಗೊಂಡಿದ್ದಾರೆ.

ಬೆಂಗಳೂರಿನ ಕೆಂಗೇರಿಯ ಭಾರತ್ ಪೆಟ್ರೋಲ್ ಬಂಕ್ ಸಮೀಪ ಘಟನೆ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ ಗೆ ಬಸ್ ಡಿಕ್ಕಿ ಆಗಿದೆ.

4 ಅಡಿ ತಡೆಗೋಡೆಗೆ ಗುದ್ದಿ ನಂತರ ಮೆಟ್ರೋ ಪಿಲ್ಲರ್ ಗೆ ಡಿಕ್ಕಿಯಾಗಿದ್ದು, ಗಾಯಗೊಂಡ 29 ಪ್ರಯಾಣಿಕರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ರಾತ್ರಿ 1.30 ರ ಸುಮಾರಿಗೆ ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...