
ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಂಕಿಯಲ್ಲಿ ನಡೆದಿದೆ.
ಸವಿತಾ ರಾಜು ಆಚಾರಿ (40) ಹಾಗೂ ಅಂಕಿತಾ ಆಚಾರಿ (17) ಮೃತರು. ಮಂಕಿ ಜಾತ್ರೆಪೇಟೆಗೆ ತೆರಳಿ ತಾಯಿ-ಮಗಳು ಸ್ಕೂಟಿಯಲ್ಲಿ ವಾಪಾಸ್ ಆಗುತ್ತಿದ್ದರು. ಈ ವೇಳೆ ಮಂಗಳೂರಿನಿಂದ ಬೆಳಗಾವಿಯತ್ತ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ. ಸ್ಕೂಟಿಯಿಂದ ಕೆಳಗೆ ಬಿದ್ದ ತಾಯಿ-ಮಗಳ ಮೇಲೆಯೇ ಬಸ್ ಹರಿದಿದೆ.
ಗಂಭೀರವಾಗಿ ಗಾಯಗೊಂಡಿದ್ದ ತಾಯಿ-ಮಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಗದೇ ಕೊನೆಯುಸಿರೆಳೆದಿದ್ದಾರೆ.
ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.