
ಶಿವಮೊಗ್ಗ: ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡದೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಶಿರಸಿ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ ಜಪ್ತಿ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರದ ಕೋರ್ಟ್ ಆವರಣದಲ್ಲಿ ಬಸ್ ನಿಲುಗಡೆ ಮಾಡಲಾಗಿದೆ. 2022ರ ಜುಲೈ 7ರಂದು ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಗಣೇಶ್ ಮೃತಪಟ್ಟಿದ್ದರು. ಸಾಗರದ ಪ್ರವಾಸಿ ಮಂದಿರ ಬಳಿ ಸೈಕಲ್ ಸವಾರ ಗಣೇಶ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದರು,
ಅಪಘಾತ ಪರಿಹಾರ ಕೋರಿ ಗಣೇಶ್ ಪೋಷಕರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಶಿವಮೊಗ್ಗ ಜಿಲ್ಲೆ ಸಾಗರದ ಐದನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಮೂರು ತಿಂಗಳೊಳಗೆ ಪರಿಹಾರ ನೀಡುವಂತೆ 2024ರ ಜುಲೈ 8ರಂದು ಕೋರ್ಟ್ ಆದೇಶ ನೀಡಿತ್ತು.
ಪರಿಹಾರ ನೀಡದ ಹಿನ್ನೆಲೆಯಲ್ಲಿ ಗಣೇಶ್ ಅವರ ತಾಯಿ ಉಮಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನೋಟಿಸ್ ಜಾರಿಗೊಳಿಸಿದ್ದು, ನೋಟಿಸ್ ಜಾರಿ ಮಾಡಿದ್ದರೂ ಕೆಎಸ್ಆರ್ಟಿಸಿ ಪರಿಹಾರ ನೀಡದ ಹಿನ್ನೆಲೆಯಲ್ಲಿ ಶಿರಸಿ ಡಿಪೋಗೆ ಸೇರಿದ ಬಸ್ ಜಪ್ತಿ ಮಾಡಿ ಕೋರ್ಟ್ ಆವರಣದಲ್ಲಿ ನಿಲುಗಡೆ ಮಾಡಲಾಗಿದೆ.