ಬೆಂಗಳೂರು: ಗೌರಿ -ಗಣೇಶ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ಪ್ರಯಾಣಿಕರ ದಟ್ಟಣೆ ಉಂಟಾಗದಂತೆ ಕೆಎಸ್ಆರ್ಟಿಸಿಯಿಂದ 1200 ಹೆಚ್ಚುವರಿ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ರಾಜಧಾನಿ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳು ಸೇವೆ
ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಶಿವಮೊಗ್ಗ, ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು, ಹಾಸನ, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು. ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮೊದಲಾದ ಸ್ಥಳಗಳಿಗೆ ವಿಶೇಷ ಬಸ್ ಗಳು ಸಂಚರಿಸಲಿವೆ
ಅಲ್ಲದೇ, ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಮಡಿಕೇರಿಗೆ ಹೆಚ್ಚುವರಿ ಬಸ್ ಗಳ ಸೇವೆ ಇರಲಿದೆ,
ಶಾಂತಿನಗರ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ,
ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆ: ರಿಯಾಯಿತಿ ಸೌಲಭ್ಯ
ಪ್ರಯಾಣಿಕರ ಅನುಕೂಲಕ್ಕೆ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ಕೂಡ ಕಲ್ಪಿಸಲಾಗಿದೆ, www.ksrtc.kar.gov.in ವೆಬ್ಸೈಟ್ ನಲ್ಲಿ ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ.
4 ಅಥವಾ 4ಕ್ಕಿಂತ ಹೆಚ್ಚು ಟಿಕೆಟ್ ಕಾಯ್ದಿರಿಸಿದವರಿಗೆ ಶೇ. 5 ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಟಿಕೆಟ್ ಒಟ್ಟಿಗೆ ಬುಕಿಂಗ್ ಮಾಡಿದಲ್ಲಿ ಶೇ. 10 ರಷ್ಟು ರಿಯಾಯಿತಿ ನೀಡಲಾಗುತ್ತದೆ.
ಕೌಂಟರ್ ವ್ಯವಸ್ಥೆ:
ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ, ಪುದುಚೇರಿಯ ಪ್ರಮುಖ ನಗರಗಳಲ್ಲಿಯೂ ಕೌಂಟರ್ ವ್ಯವಸ್ಥೆ ಕಲ್ಪಿಸಲಾಗಿದೆ.