ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದ ನಂತರ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ 259ಕ್ಕೂ ಅಧಿಕ ಹೊಸ ಮತ್ತು ಹಳೆ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ.
ಕೊರೋನಾ ಸಂದರ್ಭದಲ್ಲಿ ಅನೇಕ ಮಾರ್ಗಗಳಲ್ಲಿ ಬಸ್ ಸೇವೆ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಆ ಮಾರ್ಗದ ಜನರಿಗೆ ತೊಂದರೆಯಾಗಿತ್ತು. ಶಕ್ತಿ ಯೋಜನೆ ಜಾರಿಯಾದ ನಂತರ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಬಸ್ ಗಳ ಕೊರತೆ ಉಂಟಾಗಿದೆ. ಅಲ್ಲದೆ, ಬಸ್ ಸೇವೆಗೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ 404 ಮಾರ್ಗಗಳಲ್ಲಿ ಬಸ್ ಓಡಿಸಲು ಕೆಎಸ್ಆರ್ಟಿಸಿ ನಿರ್ಧರಿಸಿದೆ. 259 ಮಾರ್ಗಗಳಲ್ಲಿ ಬಸ್ ಸೇವೆ ಒದಗಿಸಲಾಗಿದೆ. ವಿಭಾಗೀಯ ಮಟ್ಟದಲ್ಲಿ ಬಸ್ ಗಳ ಕಾರ್ಯಾಚರಣೆಗೆ ಒಟ್ಟು 145 ಹೊಸ ಮಾರ್ಗಗಳನ್ನು ಗುರುತಿಸಲಾಗಿದ್ದು, ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಅಗತ್ಯವಿರುವ ಮಾರ್ಗಗಳಲ್ಲಿ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ.